ಬಂಟ್ವಾಳ, ಸೆ. 30 (DaijiworldNews/SM): ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಫರಂಗಿಪೇಟೆ ಸಮೀಪದ ಕುಂಪಜಲು ಎಂಬಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿ ಲೈಂಗಿಕ ದೌರ್ಜನ್ಯ ವೆಸಗಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಾರಗಳ ಹಿಂದೆ ಪ್ರಕರಣ ದಾಖಲಾಗಿತ್ತು. ಆದರೆ ಅಪರಿಚಿತ ಆರೋಪಿ ಯಾರು ಎಂಬ ಬಗ್ಗೆ ಪೋಲೀಸರಿಗೆ ತಲೆನೋವು ಶುರುವಾಗಿತ್ತು.
ಈ ಹಿನ್ನೆಲೆಯಲ್ಲಿ ಪ್ರಕರಣದ ಜಾಡು ಹಿಡಿದ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್.ಐ. ಪ್ರಸನ್ನ ನೇತೃತ್ವದ ತಂಡ ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆ ಹಾಕಿದಾಗ ಅಪ್ರಾಪ್ತ ಬಾಲಕನ ಬಗ್ಗೆ ಸುಳಿವು ಸಿಕ್ಕಿದೆ. ಅದರಂತೆ ಬಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆತ ತಪ್ಪು ಒಪ್ಪಿಕೊಂಡಿದ್ದಾನೆ. ಕಳೆದ ಕೆಲವು ತಿಂಗಳಿನಿಂದ ಕುಂಪಣಮಜಲು ಪರಿಸರದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಯುವತಿಯರಿಗೆ ಈತ ಕಿರುಕುಳ ನೀಡುತ್ತಿದ್ದ ಬಗ್ಗೆ ಸಾರ್ವಜನಿಕ ದೂರುಗಳು ಕೇಳಿ ಬಂದಿತ್ತು.
ಪ್ರಸ್ತುತ ಹುಡುಗಿಯರನ್ನು ಚುಡಾಯಿಸುತ್ತಿದ್ದುದಲ್ಲದೆ ಲೈಂಗಿಕ ದೌರ್ಜನ್ಯವೆಸುಗುತ್ತಿದ್ದ ಅಪ್ರಾತ್ತನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ್ದಾರೆ.