ಮಂಗಳೂರು, ಮೇ 15: ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡಿದ ಯು.ಟಿ.ಖಾದರ್ ಭರ್ಜರಿ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಕುತೂಹಲ ಕೆರಳಿಸಿರುವ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಯು ಟಿ ಖಾದರ್ ಗೆಲುವು ಸಾಧಿಸಿರುವುದಕ್ಕೆ ಎಲ್ಲೆಡೆ ಹರ್ಷ ವ್ಯಕ್ತವಾಗುತ್ತಿದೆ. ಈ ಹಿಂದಿನ ಚುನಾವಣೆಗಳಲ್ಲಿ ಈ ಕ್ಷೇತ್ರವನ್ನು ಗೆಲ್ಲಲು ಬಿಜೆಪಿ ರೂಪಿಸಿದ್ದ ರಣತಂತ್ರಗಳು ಮಕಾಡೆ ಮಲಗಿದ್ದು, ಈ ಭಾರಿಯೂ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ
ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದ ಸಚಿವ ಯು.ಟಿ.ಖಾದರ್ ಈ ಬಾರಿ 19,739 ಮತಗಳ ಅಂತರದಿಂದ ಗೆದ್ದು ವಿಜಯದ ನಗೆ ಬೀರಿದ್ದಾರೆ. ಸಚಿವ ಯು ಟಿ ಖಾದರ್ ತಮ್ಮ ಕ್ಷೇತ್ರದ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದು, ಅವರ ಅಭಿವೃದ್ಧಿ ಕಾರ್ಯಗಳೇ ಗೆಲುವಿಗೆ ಕಾರಣವಾಗಿದೆ.
ಈ ಬಾರಿ ಸಂತೋಷ್ ರೈ ಬೋಳಿಯಾರ್ ವಿರುದ್ಧ ಕಣಕ್ಕೆ ಇಳಿದಿದ್ದ ಸಚಿವ ಯು.ಟಿ ಖಾದರ್ ಅವರು 19,739 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಸಚಿವ ಯು.ಟಿ.ಖಾದರ್ ಅವರಿಗೆ ಒಟ್ಟು 80813 ಮತಗಳು ಬಿದ್ದರೆ, ಬಿಜೆಪಿ ಅಭ್ಯರ್ಥಿ ಸಂತೋಷ್ ರೈ ಬೋಳಿಯಾರ್ 61074ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದಾರೆ.
2013 ರ ಚನಾವಣೆಯಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯ ಎದುರು ಯು. ಟಿ ಖಾದರ್ ಸುಮಾರು 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಿದ್ದರು. ಇದೀಗ 2018 ರ ಚುನಾವಣಾ ಫಲಿತಾಂಶವೂ ಕಾಂಗ್ರೆಸ್ ಪರವಾಗಿದೆ.