ಮಂಗಳೂರು, ಅ. 01 (DaijiworldNews/SM): ಮಂದಾರ ಸಂತ್ರಸ್ತರಿಗೆ ಶೀಘ್ರದಲ್ಲೇ ಸೂಕ್ತ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ಭರವಸೆ ನೀಡಿದ್ದಾರೆ.



ಈ ಕುರಿತಂತೆ ದೈಜಿವರ್ಲ್ಡ್ ಜೊತೆ ಮಾತನಾಡಿದ ಅವರು, ಈಗಾಗಲೇ 19 ಮಂದಿಗೆ ಅಂದಾಜು 2 ಕೋಟಿ ಕೃಷಿ, ಬೆಳೆ ಹಾನಿ ವಿತರಿಸಲಾಗಿದೆ. ಉಳಿದವರ ದಾಖಲೆ ಪರಿಶೀಲಿಸಿ ಶೀಘ್ರದಲ್ಲಿ ಪರಿಹಾರ ವಿತರಿಸುತ್ತೇವೆ ಎಂದರು.
ಇನ್ನು ಪೂರ್ಣ ಪ್ರಮಾಣದ ಪರಿಹಾರಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಾಶ್ವತ ಸೂರು ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಲಾಗಿದೆ. ಕೆಲವೊಂದು ಕುಟುಂಬದವರು ಮಂದಾರದಲ್ಲೇ ವಾಸಿಸಲು ಬಯಸಿದ್ದಾರೆ. ಹೀಗಾಗಿ ಮಂದಾರ ಪರಿಸರದ ಬಗ್ಗೆ ಪರಿಶೀಲನೆ ನಡೆಸಬೇಕಾಗಿದೆ. ಸದ್ಯ ಆ ಭಾಗದಲ್ಲಿ ಬದುಕು ಕಟ್ಟಿಕೊಳ್ಳುವ ಪರಿಸ್ಥಿತಿ ಕಡಿಮೆಯಾಗಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.