ಕಾಸರಗೋಡು, ಅ. 02(DaijiworldNews/PY): ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನನ್ನು ಕಾಸರಗೋಡು ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಬಂಧಿತನನ್ನು ಕುಂಬಳೆ ಕೊಯಿಪಾಡಿಯ ಮುಸ್ತಫಾ (27) ಎಂದು ಗುರುತಿಸಲಾಗಿದೆ. ಆರೋಪಿ ಮುಸ್ತಾಫ ಅವರ ಆಟೋ ರಿಕ್ಷಾವನ್ನು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ.
ಆರೋಪಿಯಿಂದ ಒಂದು ಕಿಲೋ ಗಾಂಜಾ ಹಾಗೂ ಆಟೋ ರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.