ಮಂಗಳೂರು, ಅ. 04 (DaijiworldNews/HR): ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಆರು ಕರುಗಳು ವಾಹನದಿಂದ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ.



ಕರುಗಳನ್ನು ಅಕ್ರಮವಾಗಿ ಕುದ್ರೋಳಿಯ ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಈ ಘಟನೆಯ ಬಗ್ಗೆ ತಿಳಿದ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮತ್ತು ಭಜರಂಗದಳದ ಕಾರ್ಯಕರ್ತರು ಮನ್ನಗುಡ್ಡದಲ್ಲಿ ದಿಡೀರ್ ಪ್ರತಿಭಟನೆ ನಡೆಸಿ, ಅಕ್ರಮ ಗೋಸಾಗಾಟ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.