ಮಂಗಳೂರು, ಅ. 05(DaijiworldNews/PY): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಇಂದು ಬೆಳಗ್ಗೆ ಸಿಬಿಐ ನಡೆಸಿದ್ದ ದಾಳಿಯನ್ನು ಖಂಡಿಸಿ ಯುವ ಕಾಂಗ್ರೆಸ್ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿತು.













ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಹಾಗ ಡಿಕೆಶಿ ಅವರ ಆಪ್ತನಾಗಿರುವ ಮಿಥುನ್ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾಕಾರರು ರಸ್ತೆ ತಡೆ ಹಾಗೂ ರಸ್ತೆ ಮಧ್ಯೆ ಟೈಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದು, ಈ ನಡುವೆ ಪ್ರತಿಭಟನಾಕಾರರು ಕೊರೊನಾ ನಿಯಮವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ.
ಯಾವುದೇ ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಮಿಥುನ್ ರೈ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ.ಸುರೇಶ್ ಅವರ ಮೇಲೆ ಸಿಬಿಐ ದಾಳಿ ನಡೆಸಿದೆ. ಅಲ್ಲದೇ, ಡಿಕೆಶಿ ಅವರ ವಿರುದ್ದ ಎಫ್ಐಆರ್ ದಾಖಲಿಸಿದೆ.