ಕಾರ್ಕಳ,ಅ.5 (DaijiworldNews/HR): ಕಾಂಗ್ರೆಸ್ ನಾಯಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ರವರ ಮನೆಯ ಮೇಲೆ ಸಿಬಿಐ ದಾಳಿಯ ಹಿಂದೆ ಬಿಜೆಪಿಯ ರಾಜಕೀಯ ಹುನ್ನಾರ ಅಡಗಿದ್ದು ಇದನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಖಂಡಿಸುತ್ತದೆ ಎಂದು ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಬಲಾಢ್ಯವಾಗುತ್ತಿದ್ದು ಮುಂಬರುವ ಉಪಚುನಾವಣೆಯಲ್ಲಿ ಸೋಲುವ ಭೀತಿಯಿಂದ ಸಿಬಿಐಯನ್ನು ಚೂಬಿಟ್ಟು ಜನರನ್ನು ದಿಕ್ಕು ತಪ್ಪಿಸುವ ತನ್ನ ಹಳೇ ಛಾಳಿಯ ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬಿಜೆಪಿ ಆಡಳಿತದಲ್ಲಿ ದೇಶ ಸರ್ವಾಧಿಕಾರದತ್ತ ಹೆಜ್ಜೆ ಹಾಕುತ್ತಿದೆ. ಪ್ರಜಾತಂತ್ರ ನಾಶವಾಗುತ್ತಿದೆ. ಈ ಬಗ್ಗೆ ಜನ ಜಾಗೃತರಾಗಬೇಕಿದ್ದು ದೇಶದ ಸಂವಿಧಾನದತ್ತ ಪ್ರಜಾಪ್ರಭುತ್ವ ವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಜನ ಸಂಘಟಿತರಾಗಿ ಹೋರಾಡ ಬೇಕಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.