ಮಂಗಳೂರು, ಅ. 05 (DaijiworldNews/SM): ದ.ಕ. ಜಿಲ್ಲೆಯಲ್ಲಿ ಅಕ್ಟೋಬರ್ 15ರ ಬಳಿಕ ಹಂತ ಹಂತವಾಗಿ ಶಾಲಾ-ಕಾಲೇಜು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ತೆರೆದುಕೊಳ್ಳಲು ಅವಕಾಶವಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ಅಕ್ಟೋಬರ್ 15ರ ನಂತರ ಶಾಲಾ-ಕಾಲೇಜುಗಳನ್ನು ಪುನರಾರಂಭಗೊಳಿಸಲು ಹಂತ-ಹಂತವಾಗಿ ತೀರ್ಮಾನ ತೆಗೆದುಕೊಳ್ಳಬಹುದಾಗಿದೆ. ಸಂಬಂಧಪಟ್ಟ ಶಾಲೆ-ಕಾಲೇಜುಗಳು, ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯನ್ನು ಅವಲೋಕಿಸಿ ಅವುಗಳ ಆಧಾರದ ಮೇಲೆ ತೀರ್ಮಾನ ತೆಗೆದುಕೊಳ್ಳಬಹುದಾಗಿದೆ.
ಪ್ರಮುಖಾಂಶಗಳು:
ಆನ್ ಲೈನ್, ದೂರಶಿಕ್ಷಣಕ್ಕೆ ಆದ್ಯತೆಯ ಅನುಸಾರ ಅನುಮತಿ ಮುಂದುವರಿಸಬೇಕಾಗಿದೆ.
ಕೆಲವು ವಿದ್ಯಾರ್ಥಿಗಳು ಆನ್ ಲೈನ್ ಶಿಕ್ಷಣ ಬಯಸಿದ್ದಲ್ಲಿ ಅದಕ್ಕೆ ಅನುಮತಿ ನೀಡುವುದು
ತಂದೆ-ತಾಯಿ, ಪೋಷಕರ ಲಿಖಿತ ಅನುಮತಿಯೊಂದಿಗೆ ಮಾತ್ರವೇ ಶಾಲೆಗಳಿಗೆ /ಸಂಸ್ಥೆಗಳಿಗೆ ಹಾಜರಾಗಬಹುದು
ಶಿಕ್ಷಣ ಸಂಸ್ಥೆಗಳು ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು
ಸಂಪೂರ್ಣವಾಗಿ ಪೋಷಕರ ಅನುಮತಿಯ ಮೇಲೆ ಅವಲಂಬಿತವಾಗಿರಬೇಕು
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮಾಲೋಚಿಸಬೇಕು
ಸ್ಥಳೀಯ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಮಾದರಿ ಕಾರ್ಯನಿರ್ವಹಣಾ ಪ್ರಕ್ರಿಯೆ ಪಾಲಿಸಬೇಕು