ಮೇ, 16 : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಸರ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಹುಮತ ಪಡೆದ ಬಿಜೆಪಿ, ಕರ್ನಾಟಕದಲ್ಲಿ ಸರ್ಕಾರ ರಚಿಸಲು ಸಿದ್ದವಾಗಿದೆ. ಈ ಅವಕಾಶವನ್ನು ಅಷ್ಟು ಸುಲಭವಾಗಿ ಬಿಟ್ಟು ಕೊಡುವುದಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ. ಕರ್ನಾಟಕದ ಫಲಿತಾಂಶದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ನರೇಂದ್ರ ಮೋದಿ, ಬಿಜೆಪಿ ಅಸಾಮಾನ್ಯ ಮತ್ತು ಅಭೂತಪೂರ್ವ’ ಗೆಲುವು ಸಾಧಿಸಿದೆ ಎಂದು ಬಣ್ಣಿಸಿದ್ದಾರೆ.
ಬಿಜೆಪಿ ಸುಲಭವಾಗಿ ರಾಜ್ಯದಲ್ಲಿ ಕೈಚೆಲ್ಲುತ್ತದೆ ಎಂದು ವಿರೋಧಿಗಳು ಭಾವಿಸಿದ್ದರು ಆದರೆ 104 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅವರ ಅಲೋಚನೆಗಳನ್ನೇ ಬುಡಮೇಲು ಮಾಡಿದೆ ಎಂದರು. ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯ ಅಭಿವೃದ್ಧಿಯ ಪ್ರಯಾಣಕ್ಕೆ ಅಡ್ಡಿಯಾಗಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.