ಉಡುಪಿ, ಅ. 06 (DaijiworldNews/MB) : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮೇಲೆ ಸೋಮವಾರ ಕೇಂದ್ರ ತನಿಖಾ ದಳ (ಸಿಬಿಐ) ನಡೆಸಿದ ದಾಳಿಯನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.




















ಕಾಂಗ್ರೆಸ್ ಕಾರ್ಯಕರ್ತರು ಅಜ್ಜರಕಾಡು ಮುಖ್ಯ ರಸ್ತೆ ತಡೆದಿದ್ದು ಬಿಜೆಪಿ ಸರ್ಕಾರ, ಸಿಬಿಐ ವಿರುದ್ದ ಘೋಷಣೆಗಳನ್ನು ಕೂಗಿದರು. 'ಕನಕಪುರ ಬಂಡೆ' ಎಂದು ಕರೆಯಲ್ಪಡುವ ಶಿವಕುಮಾರ್, ಅಲುಗಾಡಿಸಲಾಗದ ಕನಕಪುರದ ಬಂಡೆಯಂತೆ ಗಟ್ಟಿಯಾಗಿದ್ದಾರೆ ಎಂಬ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಸಿಬಿಐ ಪರೇಶ್ ಮೇಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವ ಮೂಲಕ ತನ್ನ ಶಕ್ತಿಯನ್ನು ತೋರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಹರೀಶ್ ಕಿಣಿ ಸವಾಲು ಹಾಕಿ ಪರೇಶ್ ಮೇಸ್ತ ಪ್ರಕರಣದ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕೆಂದು ಹೇಳಿದರು.
ಇನ್ನು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದ 20 ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.