ಉಳ್ಳಾಲ, ಅ. 07 (DaijiworldNews/SM): ಕೊಣಾಜೆ ಠಾಣಾ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದ ಒಂಟಿ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕೆಂದು ಒತ್ತಾಯಿಸಿ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ನೇತೃತ್ವದಲ್ಲಿ ಕೊಣಾಜೆ ಠಾಣೆಗೆ ಮನವಿ ಸಲ್ಲಿಸಲಾಯಿತು.

ಬಳಿಕ ಮಾತನಾಡಿದ ಪ್ರಶಾಂತ ಕಾಜವ, ಅನುಮಾನಾಸ್ಪದ ಪ್ರಕರಣದ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಈ ಪ್ರಕರಣದಿಂದ ಮಹಿಳೆಯರಲ್ಲಿ ಸುರಕ್ಷತೆಯ ಭಾವನೆ ಕಾಡುವಂತಾಗಿದೆ. ಪ್ರಕರಣದ ನೈಜ ಆರೋಪಿಗಳನ್ನು ಪತ್ತೆಹಚ್ಚಿ ಸ್ಥಳೀಯರಲ್ಲಿರುವ ಆತಂಕ ದೂರ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಗಟ್ಟಿ ಮಾತನಾಡಿ, ಬಿಜೆಪಿ ಸರಕಾರ ಬಂದ ನಂತರ ದೇಶದಾದಂತ್ಯ ನಿರಂತರವಾಗಿ ಮಹಿಳೆಯರ ಮೇಲೆ ಅತ್ಯಾಚಾರ ಕೊಲೆ ನಡೆಯುತ್ತಿದೆ. ಬಾಳೆಪುಣಿಯ ಒಂಟಿ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸದಿದ್ದಲ್ಲಿ ಮುಡಿಪು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಹೈದರ್ ಕೈರಂಗಳ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಉಮ್ಮರ್ ಪಜೀರ್, ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಕಾಂಗ್ರೆಸ್ ಕಿಸಾನ್ ವಿಭಾಗಾಧ್ಯಕ್ಷ ಅರುಣ್ ಡಿಸೋಜ, ಕಾರ್ಮಿಕ ವಿಭಾಗಾಧ್ಯಕ್ಷ ನಾಸೀರ್ ನಡುಪದವು, ಸೇವಾದಳದ ಅಧ್ಯಕ್ಷ ಸಮೀರ್ ಪಜೀರ್, ಪ್ರಮುಖರಾದ ಶರೀಫ್ ನಡುಪದವು, ಡಾ.ಸುರೇಖಾ, ಹನೀಫ್ ಚಂದಹಿತ್ಲು, ಜಗದೀಶ್ ಪಲಾಯಿ, ಪ್ರತಾಪ್ ಕರ್ಕೇರ, ನವಾಝ್ ಕೊಲ್ಲರಕೋಡಿ ಮೊದಲಾದವರು ಉಪಸ್ಥಿತರಿದ್ದರು.