ವಿಟ್ಲ, ಅ. 08 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮತಿಯ ವಿಟ್ಲ - ವಿಟ್ಲ - ಉಪ್ಪಿನಂಗಡಿ ಬ್ಲಾಕ್ನ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ್ ಡಿ ಸೋಜ ಅವರನ್ನು ನೇಮಿಸಲಾಗಿದೆ.

ಅಶೋಕ್ ಡಿ ಸೋಜ ಅವರು ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡು ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಉಪ್ಪಿನಂಗಡಿ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಾತಿ ಆದೇಶದಲ್ಲಿ ಸೂಚಿಸಿದ್ದಾರೆ.