ಕಾಸರಗೋಡು, ಅ. 08 (DaijiworldNews/SM): ಜಿಲ್ಲೆಯಲ್ಲಿ ಗುರುವಾರ 236 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತರಿಗೆ ಸೋಂಕು ದೃಢಪಟ್ಟಿದೆ. ಈ ನಡುವೆ ಜಿಲ್ಲೆಯಲ್ಲಿ 106 ಮಂದಿ ಗುಣ ಮುಖರಾಗಿದ್ದಾರೆ. ಇನ್ನು ಇಂದಿನ ಸೋಂಕಿತರ ಪೈಕಿ 220 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. 7 ಮಂದಿ ಹೊರ ರಾಜ್ಯಗಳಿಂದ ಮರಳಿದವರಾಗಿದ್ದಾರೆ. 9 ಮಂದಿ ವಿದೇಶಗಳಿಂದ ಬಂದವರಾಗಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಇಲ್ಲಿಯ ತನಕ 13,560 ಮಂದಿಗೆ ಇದುವರೆಗೆ ಸೋಂಕು ದೃಢಪಟ್ಟಿದೆ. 4050 ಮಂದಿ ಪ್ರಸ್ತುತ ಚಿಕಿತ್ಸೆಯಲ್ಲಿದ್ದಾರೆ. 5358 ಮಂದಿ ನಿಗಾದಲ್ಲಿದ್ದಾರೆ.