ವಿಟ್ಲ,ಅ.09 (DaijiworldNews/HR): ಬೆಳ್ಳಂ ಬೆಳಿಗ್ಗೆ ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿರುವ ಘಟನೆ ವಿಟ್ಲ ಮೇಗಿನಪೇಟೆಯಲ್ಲಿ ನಡೆದಿದೆ.



ಮೇಗಿನಪೇಟೆ ನಿವಾಸಿ, ಒಂಟಿಯಾಗಿ ಜೀವನ ನಡೆಸುತ್ತಿರುವ ಲಲಿತಾ ಅವರ ಮನೆಯ ಮುಂಬಾಗಿಲು ಮೂಲಕ ನುಗ್ಗಿ ಮಹಿಳೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಹಾಕಿದ್ದಾರೆ. ಬಳಿಕ ಮನೆಯೊಳಗಡೆ ಚಿನ್ನಕ್ಕಾಗಿ ಹುಡುಕಾಟ ನಡೆಸಿದ್ದು, ಬಳಿಕ ಕುತ್ತಿಗೆಯಲ್ಲಿರುವ ಬೆಳ್ಳಿಯ ಸರ ಎಗರಿಸಿ, ಮನೆ ಮುಂಭಾಗದ ಬಾಗಿಲಿಗೆ ಬೀಗ ಹಾಕಿ ಪರಾರಿಯಾಗಿದ್ದಾರೆ.
ಬೆಳಿಗ್ಗೆ ಜೋರಾಗಿ ಸುರಿಯುತ್ತಿರುವ ಮಳೆಯ ವೇಳೆ ಈ ಕೃತ್ಯ ಎಸೆಗಿದ್ದಾರೆ.
ಮಹಿಳೆಯ ಮುಖಕ್ಕೆ ಮತ್ತು ಎದೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದು, ಪಕ್ಕದ ಸಿಸಿ ಕ್ಯಾಮಾರವನ್ನು ಪರಿಶೀಲನೆ ನಡೆಸುತ್ತಿದ್ದಾರೆ.