ಕಾಪು, ಅ.09 (DaijiworldNews/HR): ಉತ್ತರ ಪ್ರದೇಶದ ಹತ್ರಸ್ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣವನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಚ್ಚಿಲ ವತಿಯಿಂದ ಉಚ್ಚಿಲ ಪೇಟೆಯಲ್ಲಿ ಪ್ರತಿಭಟನೆ ನಡೆಯಿತು.



ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಹನೀಫ್ ಮುಳೂರು, ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಹಿಟ್ಲರ್ ಮಾದರಿ ಆಡಳಿತ ನಡೆಸುತ್ತಿದ್ದಾರೆ. ಆರೋಪಿಗಳು ಮೋದಿ ಮತ್ತು ಯೋಗಿಯ ಆಪ್ತರಾಗಿದ್ದು ಅವರಿಗೆ ರಕ್ಷಣೆ ನೀಡಲಾಗುತ್ತಿವೆ. ಇಲ್ಲಿರುವ ಕಬ್ಬಿನ ತೋಟಗಳು ಕೃಷಿ ತೋಟಗಳು ಮೇಲ್ವರ್ಗದವರಿಗೆ ಬಂಡವಾಳಶಾಹಿಗಳಿಗೆ ಮತ್ತು
ಕೋಮುವಾದಿಗಳಿಗೆ ಅತ್ಯಾಚಾರದ ಗದ್ದೆಗಳಾಗಿ ಮಾರ್ಪಟ್ಟಿದೆ. ಮುಂದಿನ ದಿನಗಳಲ್ಲಿ ಇಲ್ಲಿರುವ ಹಿಂದೂ ಕ್ರೈಸ್ತ ಮುಸಲ್ಮಾನರನ್ನು ಒಗ್ಗೂಡಿಸಿ ಅನ್ಯಾಯದ ವಿರುದ್ದ ಎಸ್ಡಿಪಿಐ ಧ್ವನಿ ಎತ್ತಲಿದೆ ಎಂದು ಹೇಳಿದರು.
ಈ ಸಂದರ್ಭ ಎಸ್ಡಿಪಿಐ ಮುಖಂಡ ಮಜೀದ್ ಪೊಲ್ಯ ಮಾತನಾಡಿ, ಅತ್ಯಾಚಾರಿಗಳನ್ನು ಕೂಡಲೇ ಗಲ್ಲಿಗೆ ಏರಿಸಬೇಕು. ಈ ವರೆಗಿನ ಕೆಟ್ಟ ಸರಕಾರದಲ್ಲಿ ಬಿಜೆಪಿ ಅಗ್ರ ಸ್ಥಾನದಲ್ಲಿದೆ ಎಂದರು.
ಪ್ರತಿಭಟನೆಯಲ್ಲಿ ಎಸ್ಡಿಪಿಐ ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸಿದರು.