ಕಾಸರಗೋಡು,ಅ.09 (DaijiworldNews/HR): ನಿಗೂಢವಾಗಿ ನಾಪತ್ತೆಯಾಗಿದ್ದ ಬೆಸ್ತರೋರ್ವರ ಮೃತದೇಹ ಪೊದೆಯೊಂದರಲ್ಲಿ ಪತ್ತೆಯಾಗಿದ್ದು , ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ.

ಬೇಕಲ ಬೀಚ್ ರಸ್ತೆಯ ರಾಮಗುರು ನಗರದ ಸುಧಾಕರ ( 32) ಮೃತಪಟ್ಟ ವ್ಯಕ್ತಿ.
ಪೂಚಕ್ಕಾಡ್ ಸಮೀಪ ನಿರ್ಮಾಣ ಹಂತದಲ್ಲಿರುವ ಕಟ್ಟಡ ಹಿಂಬಾಗದ ಪೊದೆಯೊಂದರಲ್ಲಿ ಮೃತದೇಹ ಪತ್ತೆಯಾಗಿದ್ದು, ದೇಹದದಲ್ಲಿ ಗಾಯಗಳು ಕಂಡು ಬಂದಿರುವ ಹಿನ್ನಲೆಯಲ್ಲಿ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ.
ನಿನ್ನೆ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ್ದ ಸುಧಾಕರ ಮನೆಗೆ ಮರಳದೆ ನಾಪತ್ತೆಯಾಗಿದ್ದರು. ಬಳಿಕ ಮನೆಯವರು ಹುಡುಕಾಟ ನಡೆಸಿದ್ದು, ಈ ನಡುವೆ ಪೊದೆಯೊಂದರಲ್ಲಿ ಮೃತದೇಹ ಪತ್ತೆಯಾಗಿದೆ.
ಇನ್ನು ಮೃತದೇಹದ ಮುಖ ಹಾಗೂ ತಲೆಗೆ ಗಾಯಗಳಾಗಿದ್ದು, ಇದರಿಂದ ಕೊಲೆಯಾಗಿರಬಹುದು ಎಂದು ಕುಟುಂಬಸ್ಥರು ಸಂಶಯಿಸಿದ್ದಾರೆ.
ಬೇಕಲ ಪೊಲೀಸರು ಪ್ರಕರಣ ದಾಖಲಿಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.