ಮಂಗಳೂರು, ಮೇ 18: ಮದ್ರಸಕ್ಕೆ ಕಲ್ಲು ತೂರಾಟ ನಡೆಸಿದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ಕೊಲ್ಲರಕೋಡಿ ಎಂಬಲ್ಲಿ ನಡೆದಿದೆ.
ಕೊಲ್ಲರಕೋಡಿಯ ನೂರುಲ್ ಉಲೂಮ್ ಮದ್ರಸಕ್ಕೆ ಗುರುವಾರ ತಡರಾತ್ರಿ ಕಿಡಿಗೇಡಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ದುಷ್ಕೃತ್ಯ ನಡೆದ ಕೂಡಲೇ ವಿಷಯ ಅರಿತು ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿ ದುಷ್ಕರ್ಮಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗುತ್ತಿದ್ದು, ಕೊಣಾಜೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಕರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.