ಉಡುಪಿ, ಅ. 10 (DaijiworldNews/MB) : ವೃದ್ಧರೊರ್ವರು ಅಜ್ಜರಕಾಡು ಜಿಲ್ಲಾಸ್ಪತ್ರೆ ಸನಿಹ ಇರುವ ವಸತಿ ಸಂಕೀರ್ಣ ಇದರ 11 ನೇ ಮಹಡಿಯ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ.

ಮೃತ ವ್ಯಕ್ತಿಯನ್ನು ಪಿ. ನಾರಾಯಣ ಪೂಜಾರಿ (80) ಕೊಡಂಕೂರಿನ ನಿವಾಸಿ ಎಂದು ಹೇಳಲಾಗಿದೆ.
ಪೋಲಿಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಉಚಿತ ಅಂಬುಲೇನ್ಸ್ ಸೇವೆಯನ್ನು ನೀಡಿ ಇಲಾಖೆಗೆ ಸಹಕಾರ ನೀಡಿದ್ದಾರೆ.