ಮಂಗಳೂರು, ಮೇ 18: ಬಿಜೆಪಿ ವಿಜಯೋತ್ಸವದ ವೇಳೆ ಚರ್ಚ್ ಮೇಲೆ ದಾಳಿಯಾಗಿದೆ ಎಂದು ಸುಳ್ಳು ಸುದ್ದಿ ಹರಡಿಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಕಮಿಷನರ್ ವಿಪುಲ್ ಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ವಿಜಯೋತ್ಸವದ ವೇಳೆ ಚರ್ಚ್ ಮೇಲೆ ದಾಳಿಯಾಗಿದೆ ಅನ್ನುವ ಆರೋಪವೊಂದು ಕೇಳಿಬಂದಿತ್ತು. ಕೆಲ ಕಿಡಿಗೇಡಿಗಳು ವಾಟ್ಸಪ್, ಫೇಸ್ಬುಕ್ ನಲ್ಲಿ ಚರ್ಚ್ ಮೇಲೆ ದಾಳಿಯಾಗಿದೆ ಎಂದು ಸುಳ್ಳು ಸುದ್ದಿ ಹರಿಯಬಿಟ್ಟಿದ್ದರು. ಈ ಸುಳ್ಳು ಹರಿಡಿಸಿರುವವ ವಿರುದ್ಧ ಸುಮೋಟೋ ಕೇಸು ದಾಖಲಿಸಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಚುನಾವಣಾ ವಿಜಯೋತ್ಸವದ ಸಂದರ್ಭದಲ್ಲಿ ಮಂಗಳೂರಿನ ಅಡ್ಯಾರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಘಟನೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಬಂಧಿತರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
ನೌಷದ್, ದಾವೂದ್, ಮುಹಮ್ಮದ್ ಜುನೈರ್, ಶಾಹುಲ್ ಹಮೀದ್, ಹರೀಶ್ ಪೂಜಾರಿ, ಅಭಿಷೇಕ್, ನಿಶಾಂತ್ ಬಂಧಿತ ಆರೋಪಿಗಳು.