ಉಡುಪಿ, ಅ. 11 (DaijiworldNews/PY): ಶಾಸಕರ ರಘುಪತಿ ಭಟ್ ಅವರಿಗೆ ಕೊರೊನಾ ದೃಢಪಟ್ಟಿದ್ದು, ಈ ಬಗ್ಗೆ ಸ್ವತಃ ಅವರೇ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮಸ್ಕಾರಗಳು, ಆತ್ಮಿಯರೇ, ಕೊರೊನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ ಎಂದಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ಗೆ ಒಳಗಾಗಿ ಜಾಗ್ರತೆ ವಹಿಸಿ. ಧನ್ಯವಾದಗಳು ಎಂದು ಹೇಳಿದ್ದಾರೆ.