ವಿಟ್ಲ, ಅ. 11 (DaijiworldNews/SM): ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ಎಂಬಲ್ಲಿ ಒಂಟಿ ಮಹಿಳೆಯ ಮನೆಗೆ ದಾಳಿ ನಡೆಸಿ, ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸ್ ತಂಡ ಯಶಸ್ವಿಯಾಗಿದೆ.

ಉತ್ತರ ಪ್ರದೇಶ ಸಹರನಪುರ ಜಿಲ್ಲೆ ನಿವಾಸಿ ಜುಬೈರ್ ಅಹಮ್ಮದ್(24) ಬಂಧಿತ ಆರೋಪಿಯಾಗಿದ್ದಾನೆ. ಈತ ಕಳೆದ ಮೂರು ವರ್ಷಗಳಿಂದ ಮೇಗಿನಪೇಟೆಯ ರಮ್ಲಾ ಮರದ ಪೀಠೋಪಕರಣ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾನೆ. ಮೂರು ದಿನಗಳಿಂದ ಮನೆ ಪಕ್ಕದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ ಬಗ್ಗೆ ಮಹಿಳೆ ನೀಡಿದ ಮಾಹಿತಿ ಹಾಗೂ ವಿವಿಧ ಮಾಹಿತಿಗಳನ್ನು ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮನೆಯೊಂದರಲ್ಲಿರುವ ಖಚಿತ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನಿಂದ ಕೃತ್ಯದ ಸಮಯ ಬಳಸಿದ ವಸ್ತುಗಳನ್ನು ಹಾಗೂ ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ.