ಮಂಗಳೂರು, ಅ. 12 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕು ದಿನದಿಂದಕ್ಕೆ ಹೆಚ್ಚುತ್ತಲೇ ಇದ್ದು, ಸೋಮವಾರದಂದು ಮತ್ತೆ 303 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 26832ಕ್ಕೆ ಏರಿಕೆಯಾಗಿದೆ.

ದ.ಕ. ಜಿಲ್ಲೆಯ ಸೋಮವಾರದ ಕೊರೋನಾ ವರದಿ:
ಸೋಮವಾರದಂದು ದ.ಕ. ಜಿಲ್ಲೆಯಲ್ಲಿ 303 ಮಂದಿಯಲ್ಲಿ ಪಾಸಿಟಿವ್
ಜಿಲ್ಲೆಯಲ್ಲಿ ಸೋಮವಾರದಂದು ಗುಣಮುಖರಾದವರು 194 ಮಂದಿ
ಒಟ್ಟು ಗುಣಮುಖರಾದವರು 21938 ಮಂದಿ
ಸೋಮವಾರದಂದು 4 ಮಂದಿ ಸೋಂಕಿಗೆ ಬಲಿ
ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 609ಕ್ಕೆ ಏರಿಕೆ
ಜಿಲ್ಲೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿರುವವರು-4285 ಮಂದಿ
ದ.ಕ. ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೆ ಒಳಪಟ್ಟವರು-199759 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳು-172927
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಕೇಸ್ ಗಳು 26832