ಮಂಗಳೂರು,ಅ. 13 (DaijiworldNews/HR): ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆಪಿ.ರಾಜೇಂದ್ರ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಜಿಲ್ಲಾಧಿಕಾರಿಯವರು ಕೊರೊನಾ ಪರೀಕ್ಷೆಗೆ ಒಳಗಾದಾಗ ಕೊರೊನಾ ಸೋಂಕು ದೃಢ ಪಟ್ಟಿದ್ದು ಹೀಗಾಗಿ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನುಜಿಲ್ಲಾಧಿಕಾರಿಗಳಿಗೆ ಕೊರೊನಾ ದೃಢಪಟ್ಟ ಹಿನ್ನಲೆಯಲ್ಲಿ, ಮಂಗಳೂರು ಮಹಾನಗರ ಪಾಲಿಕೆ ಕಮೀಷನರ್ ಕೂಡ ಹೋಂ ಕ್ವಾರಂಟೈನ್ ಆಗಿದ್ದಾರೆ ಎನ್ನಲಾಗಿದೆ.