ಮಂಗಳೂರು, ಅ. 13 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮಂಗಳವಾರದಂದು ಮತ್ತೆ 314 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಕೂಡ ಉತ್ತಮವಾಗಿದೆ. ಮಂಗಳವಾರದಂದು ಸುಮಾರು 486 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ದ.ಕ. ಜಿಲ್ಲೆಯ ಮಂಗಳವಾರದ ಕೊರೋನಾ ವರದಿ
204805 ಮಂದಿ ಜಿಲ್ಲೆಯಲ್ಲಿ ಒಟ್ಟು ಪರಿಕ್ಷೆಗೆ ಒಳಪಟ್ಟವರಾಗಿದ್ದಾರೆ.
177659 ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳಾಗಿವೆ
27146 ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಕೇಸ್ ಗಳು
314 ಮಂಗಳವಾರದಂದು ಜಿಲ್ಲೆಯಲ್ಲಿ ಪತ್ತೆಯಾದ ಪಾಸಿಟಿವ್ ಕೇಸ್ ಗಳು
486 ಮಂದಿ ಮಂಗಳವಾರದಂದು ಜಿಲ್ಲೆಯಲ್ಲಿ ಗುಣಮುಖರಾದವರು
22424 ಮಂದಿ ಒಟ್ಟು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರು
ಮಂಗಳವಾರದಂದು ಮತ್ತೆ ಮೂವರು ಸೋಂಕಿಗೆ ಬಲಿಯಾಗಿದ್ದಾರೆ
612 ಮಂದಿ ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು
4110 ಮಂದಿ ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು