ಸುರತ್ಕಲ್, ಅ. 13 (DaijiworldNews/SM): ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಬುದ್ಧಿ ಮಾತು ಹೇಳಿದ್ದಕ್ಕೆ ಆಕ್ರೋಶಗೊಂಡ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಳಾಯಿಯ ಗೋಕುಲ ನಗರದಲ್ಲಿ ನಡೆದಿದೆ.

ಸುಜೇತಾ(16) ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದಾಳೆ. ಈಕೆ ಅತಿಯಾಗಿ ಮೊಬೈಲ್ ಬಳಸುತ್ತಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ತಾಯಿ ಬಾಲಕಿಗೆ ಬುದ್ಧಿ ಮಾತು ಹೇಳಿದ್ದಾರೆ. ಇದರಿಂದಾಗಿ ನೊಂದುಕೊಂಡ ಸುಜೇತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಮನೆಯ ಕೋಣೆಯಲ್ಲಿ ಫ್ಯಾನಿಗೆ ಸೀರೆ ಬಳಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.