ಮಂಗಳೂರು, ಅ. 15 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಹಾನಿಯ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿರುವ ನಿಯೋಗವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಬಹಳಷ್ಟು ಹಾನಿಯಾಗಿದೆ. ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ಧನ ನೀಡುವ ಬಗ್ಗೆ ಮುಖ್ಯಮಂತ್ರಿಯವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.
ಕರಾವಳಿಯ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಬೇಕು ಹಾಗೂ ಮರಳು ಗಣಿಗಾರಿಕೆ ನಿಯಮಗಳಿಗೆ ತಿದ್ದುಪಡಿ ತರಬೇಕು ಎಂದು ಕರಾವಳಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಹಿರಿಯ ಶಾಸಕರಾದ ಶ್ರೀ ಅಂಗಾರ, ಶಾಸಕರಾದ ಡಿ.ವೇದವ್ಯಾಸ್ ಕಾಮತ್, ಡಾ ಭರತ್ ಶೆಟ್ಟಿ, ಶ್ರೀ ಉಮಾನಾಥ ಕೋಟ್ಯಾನ್, ಶ್ರೀ ಸಂಜೀವ ಮಠಂದೂರು, ಶ್ರೀ ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.