ಮಂಗಳೂರು, ಅ. 15 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೆ 301 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಮತ್ತೊಂದೆಡೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಕೂಡ ಉತ್ತಮವಾಗಿದೆ.
ಗುರುವಾರದಂದು ದ.ಕ. ಜಿಲ್ಲಾಡಳಿತ ನೀಡಿರುವ ಕೊರೋನಾ ವರದಿ:
ಜಿಲ್ಲೆಯಲ್ಲಿ ಒಟ್ಟು 27,739 ಪಾಸಿಟಿವ್ ಪ್ರಕರಣಗಳು
ಪ್ರಸ್ತುತ 3707 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು 22,13,494 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಕೇಸ್ ಗಳು 1,85,755
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು-23,413
ಗುರುವಾರದಂದು 490 ಮಂದಿ ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 619ಕ್ಕೆ ಏರಿಕೆ