ಮಂಗಳೂರು, ಅ. 17 (DaijiworldNews/SM): ಉಳ್ಳಾಲ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದು, ಅಕ್ರಮ ಗಣಿಗಾರಿಕೆ ಇದ್ದರೆ ಕಠಿಣ ಕ್ರಮ ಕೈಗೊಳ್ಳಲು ಈ ಹಿಂದೆಯೇ ಜಿಲ್ಲಾಧಿಕಾರಿ, ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಯುಟಿ ಖಾದರ್, ಅಕ್ರಮವಾಗಿ ನಡೆಯುತ್ತಿರುವ ಗಣಿಗಾರಿಕೆಯ ವಿರುದ್ಧ ಜಿಲ್ಲಾಡಳಿತ ಸಮಗ್ರ ತನಿಖೆ ಮಾಡಲಿ ಎಂದಿದ್ದಾರೆ.
ಇನ್ನು ಎಸಿ ದಾಳಿ ಮಾಡುವ ಮೊದಲು ಹನ್ನೊಂದು ಗಂಟೆಗೆ ದಾಳಿ ಆಗುವ ವಿಚಾರ ಬೆಳಗ್ಗೆ 9:30ಕ್ಕೆ ಬಿಜೆಪಿಗರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಹೀಗೆ ಮಾಡಿದ್ದಲ್ಲಿ ಅಕ್ರಮ ಗಣಿಗಾರಿಕೆ ಮಾಡುವವರು ಸಿಗುತ್ತಾರಾ? ಬಳಿಕ ಅಲ್ಲಿ ರಸ್ತೆಯಲ್ಲಿ ಸಕ್ರಮವಸಗಿರುವವರ ವಾಹನ ಸೀಝ್ ಮಾಡ್ತಾರೆ ಇದು ಯಾವ ನ್ಯಾಯ ಎಂದು ಅವರು ಪ್ರಶ್ನಿಸಿದ್ದಾರೆ.
ಎಸಿಗೆ ನೋಟೀಸ್ ನೀಡಿ ಕ್ರಮ ಕೈಗೊಳ್ಳಲಿ ಎಂದು ಅವರು ಒತ್ತಾಯಿಸಿದ್ದಾರೆ.