ಮಂಗಳೂರು, ಅ. 17 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶನಿವಾರದಂದು ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಅಲ್ಪ ಇಳಿಕೆಯಾಗಿದ್ದು, ಇಂದು 172 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಈ ನಡುವೆ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆಯೂ ಕೂಡ ಉತ್ತಮವಾಗಿದ್ದು, ಶನಿವಾರದಂದು 212 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ದ.ಕ. ಜಿಲ್ಲಾಡಳಿತ, ಆರೋಗ್ಯ ಇಲಾಖೆ ನೀಡಿದ ಶನಿವಾರದ ಕೊರೋನಾ ವರದಿ:
ದ. ಕ. ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೆ ಒಳಪಟ್ಟವರು-2,21,071 ಮಂದಿ
ದ.ಕ. ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳು-192940
ಜಿಲ್ಲೆಯಲ್ಲಿ ಇಂದಿನ ತನಕ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-28131
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು-172
ಜಿಲ್ಲೆಯಲ್ಲಿ ಶನಿವಾರದಂದು ಗುಣಮುಖರಾದವರು-212 ಮಂದಿ
24,016 ಜಿಲ್ಲೆಯಲ್ಲಿ ಒಟ್ಟು ಗುಣಮುಖರಾಗಿ ಬಿಡುಗಡೆಯಾದವರು
ಶನಿವಾರದಂದು ನಾಲ್ವರು ಕೊರೋನಾ ಸೋಂಕಿಗೆ ಬಲಿ
ದ.ಕ. ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು-628 ಮಂದಿ
ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು-3487 ಮಂದಿ