ಮಂಗಳೂರು, ಅ.18 (DaijiworldNews/HR): ಮೀನಿನ ವಾಹನದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಗುಂಪನ್ನು ಇಂದು ಬೆಳಿಗ್ಗೆ ಮಂಗಳೂರಿನ ಪಂಪ್ ವೆಲ್ ಬಳಿ ವಶಕ್ಕೆ ಪಡೆದ ಘಟನೆ ನಡೆದಿದೆ.





ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಟ್ರಕ್ ನ್ನು ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ವಾಹನದಲ್ಲಿದ್ದ ಸುಮಾರು 10 ಟನ್ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ.