ಕಾರ್ಕಳ, ಅ. 19 (DaijiworldNews/SM): ತಾಲೂಕಿನ ಪಿಲಾರು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎನ್ನುವ ಆರೋಪ ವ್ಯಕ್ತವಾಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಗಳು ಕೇಳಿಬಂದಿದ್ದು, ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಪಿಲಾರುವಿನ ಕಾನದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಇದರಿಂದಾಗಿ ಸ್ಥಳೀಯ ಮನೆಗಳಿಗೆ ತೊಂದರೆಯಾಗುತ್ತಿದೆ. ಸ್ಪೋಟಕ ಬಳಸಿದ ಪರಿಣಾಮ ಈಗಾಗಲೇ ಕೆಲವು ಮನೆಗಳ ಗೋಡೆಗಳಿಗೆ ಹಾನಿಯಾಗಿದ್ದು, ಬಿರುಕುಬಿಟ್ಟಿವೆ. ಇನು ಗಣಿಗಾರಿಕೆ ಮುಂದುವರೆದಲ್ಲಿ ಮತ್ತಷ್ಟು ಹಾನಿ ಸಂಭವಿಸುವ ಸಾಧ್ಯತೆ ಇದೆ. ಅಲ್ಲದೆ, ಪ್ರಾಣ ಹಾನಿ ಸಂಭವಿಸುವ ಸಾಧ್ಯತೆಗಳೂ ಕೂಡ ಇವೆ. ಈ ಹಿನ್ನೆಲೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಸ್ಥಳೀಯರು ಮನವಿ ಸಲ್ಲಿಸಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.