ಮಂಗಳೂರು, ಅ. 21 (DaijiworldNews/MB) : ಕರ್ತವ್ಯದಲ್ಲಿದ್ದ ಸಂದರ್ಭ ಪ್ರಾಣ ಕಳೆದುಕೊಂಡ ಪೊಲೀಸ್ ಸಿಬ್ಬಂದಿಗಳ ತ್ಯಾಗದ ನೆನಪಿಗಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಅಕ್ಟೋಬರ್ 21 ರ ಬುಧವಾರ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಆವರಣದಲ್ಲಿ 'ಹುತಾತ್ಮರ ದಿನ' ಆಚರಿಸಿದರು.






















ಸಭೆಯನ್ನುದ್ದೇಶಿಸಿ ಮಾತನಾಡಿದ ಪಶ್ಷಿಮ ವಲಯ ಐಜಿಪಿ ದೇವಜ್ಯೋತಿ ರೇ, "ಕೊರೊನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವಲ್ಲಿ ಮತ್ತು ನಿಯಂತ್ರಿಸುವಲ್ಲಿ ಪೊಲೀಸ್ ಪಡೆ ಯಾವಾಗಲೂ ಮುಂಚೂಣಿಯಲ್ಲಿದೆ. ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪೊಲೀಸರು ತಮ್ಮ ಕೆಲಸವನ್ನು ಮುಂದುವರಿಸಬೇಕು. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡದಂತಹ ಪಶ್ಷಿಮ ವಲಯದ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನಿಂದಾಗಿ ಯಾವುದೇ ಪೊಲೀಸ್ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿಲ್ಲ ಎಂದು ಹೇಳಿದರು.
ಐಜಿಪಿ ದೇವಜ್ಯೋತಿ ರೇ ಅವರೊಂದಿಗೆ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಸ್, ಪೊಲೀಸ್ ವರಿಷ್ಠಾಧಿಕಾರಿ ಬಿ ಎಂ ಲಕ್ಷ್ಮಿ ಪ್ರಸಾದ್, ಕೋಸ್ಟ್ಗಾರ್ಡ್ ಕಮಾಂಡೆಂಟ್ ಎಸ್ ಬಿ ವೆಂಕಟೇಶ್ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
ಕಳೆದ ಒಂದು ವರ್ಷದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಕರ್ನಾಟಕದ 17 ಮಂದಿ ಸೇರಿದಂತೆ 264 ಪೊಲೀಸ್ ಸಿಬ್ಬಂದಿಗಳ ಹೆಸರನ್ನು ಪೊಲೀಸ್ ಅಧೀಕ್ಷಕ ಬಿ ಎಂ ಲಕ್ಷ್ಮಿ ಪ್ರಸಾದ್ ಅವರು ಪ್ರಸ್ತಾಪಿಸಿದರು.