ಕಾಸರಗೋಡು, ಅ 21 (DaijiworldNews/SM): ಜಿಲ್ಲೆಯ ಗಡಿ ಪ್ರದೇಶದಲ್ಲಿ ತಪಾಸಣೆ ಪುನರಾರಂಭಿಸಲು ಜಿಲ್ಲಾ ಮಟ್ಟದ ಕೊರೋನಾ ಸಲಹಾ ಸಮಿತಿ ಸಭೆ ತೀರ್ಮಾನಿಸಿದೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ತಲಪಾಡಿ ಸೇರಿದಂತೆ 16 ಗಡಿ ರಸ್ತೆಗಳಲ್ಲಿ ತಪಾಸಣೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕಾಗಿ ಪೊಲೀಸ್, ಆರೋಗ್ಯ, ಕಂದಾಯ ಇಲಾಖೆಯ ಸೇವೆಯನ್ನು ಬಳಸಲು ನಿರ್ಧರಿಸಲಾಗಿದೆ.
ಇನ್ನು ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರು ಕೋವಿಡ್ ಜಾಗ್ರತಾ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಬೇಕಾಗಿದೆ. ಇದು ಖಚಿತಪಡಿಸಲು ತಪಾಸಣೆ ನಡೆಸಲು ತೀರ್ಮಾನಿಸಿದ್ದು, ಕೋವಿಡ್ ತಪಾಸಣಾ ವ್ಯವಸ್ಥೆ ಕಲ್ಪಿಸಲಾಗುವುದು. ೨೪ ಗಂಟೆಯೂ ತಪಾಸಣೆ ನಡೆಸಲಾಗುವುದು ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.