ಉಡುಪಿ, ಅ 21 (DaijiworldNews/SM): ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ಶಾಂತಿಯುತ ಮತ್ತು ನೆಮ್ಮದಿ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದರು.


ಅವರು ಬುಧವಾರ ಜಿಲ್ಲಾ ಪರೇಡ್ ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಕರ್ತವ್ಯದ ಪಾಲನೆಯಲ್ಲಿ ಪ್ರಾಣ ಸಮರ್ಪಿಸಿದ ಪೊಲೀಸರ ಸ್ಮರಣೆಗೆ ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಂತಹ ಕಷ್ಟದ ಸಂದರ್ಭದಲ್ಲಿ ಪ್ರತಿಯೊಬ್ಬರು ಮೊದಲಿಗೆ ನೆನಪಿಸುವುದು ಪೊಲೀಸರನ್ನಾಗಿದ್ದು ಎಂತಹ ಕಷ್ಟದ ಕೆಲಸವನ್ನು ಹೆದರದೆ ನಿರ್ವಹಿಸುವ ಪೊಲೀಸರ ಸೇವೆ ಅನನ್ಯವಾದುದು.
ಉಡುಪಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಸಂದರ್ಭದಲ್ಲಿ ಪೊಲೀಸರು ಜಿಲ್ಲೆಯ ಗಡಿಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿದುದರ ಪರಿಣಾಮ ವಿಪರೀತ ಮಟ್ಟಕ್ಕೆ ಹೋಗುವುದನ್ನು ತಪ್ಪಿಸಿದ್ದು ಇಲಾಖೆಯ ಕರ್ತವ್ಯಪ್ರಜ್ಞೆಯೊಂದಿಗೆ ಜಿಲ್ಲೆಯನ್ನು ಸೇಫ್ ಇರುವಂತೆ ನೋಡಿಕೊಂಡಿದ್ದಾರೆ ಅಲ್ಲದೆ ಇತ್ತೀಚೆಗೆ ಬಂದ ಮಹಾ ಮಳೆಯ ಸಂದರ್ಭದಲ್ಲಿ ಕೂಡ ಜೀವದ ಹಂಗು ತೊರೆದು ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಜಿಲ್ಲೆಯಲ್ಲಿ ಯಾವುದೇ ರೀತಿಯ ಸಾವು ನೋವು ಉಂಟಾಗದಂತೆ ಸೇವೆ ನೀಡಿದ್ದಾರೆ ಎಂದರು.