ಉಡುಪಿ, ಅ. 23 (DaijiworldNews/MB) : ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರಿಂದ ಅಕ್ಟೋಬರ್ 22, ಗುರುವಾರ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.






ಜಿಲ್ಲೆಯ ದೀರ್ಘ ಕಾಲದ ಬೇಡಿಕೆ ಇದಾಗಿದ್ದು ಈ ಬೇಡಿಕೆ ಈಡೇರಿದ ಕಾರಣದಿಂದಾಗಿ ನಗರದ ಬಿಜೆಪಿ ಸದಸ್ಯರು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಹಾಗೆಯೇ ಆಸ್ಪತ್ರೆಯ ಸಿಬ್ಬಂದಿಗಳಿಗೆ ಸಿಹಿತಿಂಡಿಗಳನ್ನು ವಿತರಿಸಿದರು, ರೋಗಿಗಳಿಗೆ ಹಣ್ಣುಗಳನ್ನು ವಿತರಿಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮಧುಸೂದನ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಮೂಳೆಚಿಕಿತ್ಸಕ ಡಾ.ಗಣೇಶ್ ನಾಯಕ್, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಯುವ ಮೋರ್ಚಾದ ಅಧ್ಯಕ್ಷ ರೋಷನ್ ಶೆಟ್ಟಿ, ಪುರಸಭೆ ಸದಸ್ಯ ಮಂಜುನಾಥ್ ಮಣಿಪಾಲ್ ಉಪಸ್ಥಿತರಿದ್ದರು.