ಬೆಂಗಳೂರು , ಮೇ 23 : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಎಚ್. ಡಿ. ಕುಮಾರಸ್ವಾಮಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ವಿಧಾನ ಸೌಧದ ಮುಂಬಾಗ ನಡೆದ ಕಾರ್ಯಕ್ರಮಕ್ಕೆ ಬರಿಗಾಲಿನಲ್ಲಿ ಶ್ವೇತವರ್ಣದ ಪಂಚೆ ಶರ್ಟ್ ಧರಿಸಿ ವೇದಿಕೆಗೆ ಬಂದ ಕುಮಾರಸ್ವಾಮಿ ಅವರಿಗೆ ರಾಜ್ಯಪಾಲ ವಜುಬಾಯಿ ರುಢುಬಾಯಿವಾಲ ಪ್ರತಿಜ್ಞಾವಿಧಿ ಬೋಧಿಸಿದ್ದು, ದೇವರ ಹಾಗೂ ಕನ್ನಡ ನಾಡಿನ ಜನತೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ಉಪಮುಖ್ಯಮಂತ್ರಿಯಾಗಿ ಜಿ.ಪರಮೇಶ್ವರ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕುಮಾರಸ್ವಾಮಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ ಹರಿದು ಬಂದಿದ್ದು, ತೃತೀಯ ರಂಗದ ಬಲ ಪ್ರದರ್ಶನದ ವೇದಿಕೆಯಾದ ಎಚ್ಡಿಕೆ ಪಟ್ಟಾಭಿಷೇಕ ಸಮಾರಂಭಕ್ಕೆ ಘಟಾನುಘಟಿ ನಾಯಕರು ಸಾಕ್ಷಿಯಾಗಿದ್ದು ವಿಶೇಷ
ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ, ಸೋ ನಿಯಾ ಗಾಂಧಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ,ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ, ಸಿಪಿಐಎಂ ಸೀತಾರಾಮ್ ಯೆಚೂರಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.