ಮಂಗಳೂರು, ಅ. 23 (DaijiworldNews/SM): ಇಲ್ಲಿಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿನ್ನ ಸಹಿತ ಆರೋಪಿಯನ್ನು ಬಂಧಿಸಲಾಗಿದೆ.

ಮಹಮ್ಮದ್ ಅಶ್ರಫ್ ಬಂಧಿತ ಆರೋಪಿ. ಈತನಿಂದ ಅಂದಾಜು 27ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧ 531.390 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಈತ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದ. ಈ ವೇಳೆ ಚಿನ್ನದ ಪೌಂಡನ್ನು ದೇಹದೊಳಗೆ ಅಳವಡಿಸಿ ಸಾಗಾಟ ಮಾಡಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಅಕ್ರಮ ಸಾಗಾಟ ಪತ್ತೆಯಾಗಿದ್ದು, ಚಿನ್ನ ಸಹಿತ ಆತನನ್ನು ವಶಕ್ಕೆ ಪಡೆಯಲಾಗಿದೆ.