ಮಂಗಳೂರು, ಅ. 24 (DaijiworldNews/MB) : ದ.ಕ. ಜಿಲ್ಲೆಯಲ್ಲಿ ಶುಕ್ರವಾರ 329 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಸೋಂಕು ಏರಿಕೆಯ ನಡುವೆಯೇ ಸೋಂಕಿನಿಂದ ಗುಣಮುಖರಾಗುತ್ತಿರುವ ಸಂಖ್ಯೆಯೂ ಕೂಡಾ ಜಿಲ್ಲೆಯಲ್ಲಿ ಅಧಿಕವಾಗಿದ್ದು ಜಿಲ್ಲೆಯಲ್ಲಿ ಶುಕ್ರವಾರ 290 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 29265 ಕ್ಕೆ ಏರಿಕೆಯಾಗಿದ್ದು ಈವರೆಗೆ 25824 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 2782 ಸಕ್ರಿಯ ಪ್ರಕರಣಗಳಾಗಿವೆ.
ಇನ್ನು ಶುಕ್ರವಾರ 4 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ 657 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.