ಮಂಗಳೂರು, ಅ.24 (DaijiworldNews/PY): ದ.ಕ ಜಿಲ್ಲೆಯಲ್ಲಿ ಶನಿವಾರ 136 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ನಡುವೆ ಶನಿವಾರ ಸೋಂಕಿನಿಂದ 300 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ ಒಟ್ಟು 26,125 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 29401 ಕ್ಕೆ ಏರಿಕೆಯಾಗಿದ್ದು 2616 ಸಕ್ರಿಯ ಪ್ರಕರಣಗಳಾಗಿವೆ.
ಇನ್ನು ಶನಿವಾರ 3 ಮಂದಿ ಸೋಂಕಿತರು ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಈವರೆಗೆ 660 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.