ಬಿ.ಸಿ.ರೋಡ್ ಸೆ 24: ನಗರದಿಂದ ಅಕ್ರಮವಾಗಿ ಮರಳು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಇಂದು ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಪರಿಣಾಮ ನಿಲ್ಲಿಸಿದ್ದ ೪ ಬಸ್ಸುಗಳಿಗೆ ಹಾನಿಯಾಗಿದೆ. ಬಿ.ಸಿ ರೋಡ್ ನ ಭಾರತ್ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದ್ದು, ಸ್ಥಳದಲ್ಲಿ ನಿಲ್ಲಿಸಿದ್ದ ೪ ಬಸ್ಸುಗಳು ನಜ್ಜುಗುಜ್ಜಾಗಿವೆ. ಲಾರಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದು ಆದರೆ ಆತ ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನು ಅತೀ ವೇಗವಾಗಿ ಚಾಲನೆ ಮಾಡಿರುವುದೇ ಈ ಅವಘಡಕ್ಕೆ ಕಾರಣ ಎಂದು ತಿಳಿದುಬಂದಿದೆ