ಮಂಗಳೂರು, ಅ.26 (DaijiworldNews/PY): ಜಿಲ್ಲೆಯಲ್ಲಿ ಅ.29ರಂದು ಈದ್ ಮಿಲಾದ್ ಆಚರಿಸಲಾಗುತ್ತಿದ್ದು, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಹಬ್ಬದ ಆಚರಣೆಗೆ ಮಾರ್ಗಸೂಚಿ ಹೊರಡಿಸಿದ್ದಾರೆ.

ತೆರೆದ ಸ್ಥಳಗಳಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ಪ್ರವಚನಗಳನ್ನು ಆಯೋಜಿಸುವುದನ್ನು ನಿರ್ಬಂಧಿಸಲಾಗಿದೆ. ಸೋಪು ಅಥವಾ ಸ್ಯಾನಿಟೈಸರ್ನಿಂದ ಕೈ ತೊಳೆಯಲು ವ್ಯವಸ್ಥೆ ಮಾಡಬೇಕು. ಅಲ್ಲದೇ, ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾಮಾಜಿಕ ಮೆರವಣಿಗೆ ಆಯೋಜಿಸುವುದು ಹಾಗೂ ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.
ಮೊಹಲ್ಲಾಗಳಲ್ಲಿ ಹಗಲು-ರಾತ್ರಿ ಪ್ರವಚನಗಳು, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಭೆಗಳನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.