ಕಾಸರಗೋಡು, ಅ. 26 (DaijiworldNews/HR): ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತ್ತಿಕೋಲ್ ನಲ್ಲಿ ನಡೆದಿದ್ದು, ಕಿರುಕುಳ ಕೃತ್ಯಕ್ಕೆ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕುತ್ತಿಕೋಲು ಪಂಚಾಯತ್ ಸದಸ್ಯ ಜೋಸ್ ರವರ ಪತ್ನಿ ಜಿನೋ ( 35) ಎಂದು ಗುರುತಿಸಲಾಗಿದೆ.
ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದ ಜಿನೋ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು , ಪತಿ ಹಾಗೂ ಪತಿ ಮನೆಯವರ ಕಿರುಕುಳದಿಂದ ಬೇಸತ್ತು ವಿಷ ಸೇವನೆ ಮಾಡಿದ್ದಾಗಿ ಆರೋಪಿಸಲಾಗಿದೆ.
ಜಿನೋ ಅವರ ಸಹೋದರ ಜೋಬಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.