ಮಂಗಳೂರು, ಅ. 27 (DaijiworldNews/MB) : ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ನಲ್ಲಿ ಇಂದು ಸಂಜೆ ಸಂಭವಿಸಿದೆ.





ಬಜಾಲ್ ನಿವಾಸಿ ರಯಾನ್ ಫೆರ್ನಾಂಡಿಸ್ (26) ಮತ್ತು ಪ್ರಿಯಾ ಫೆರ್ನಾಂಡಿಸ್ (26) ಮೃತರು.
ಕಂಕನಾಡಿ ಫಾದರ್ ಮುಲ್ಲಸ್೯ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ಇಬ್ಬರು ಕರ್ತವ್ಯ ಮುಗಿಸಿ ಉಳ್ಳಾಲ ಬಂಗೇರಲೇನ್ನಲ್ಲಿರುವ ಬಾಡಿಗೆ ಮನೆಗೆ ತೆರಳಯವ ಸಂದರ್ಭ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದೆ. ದಂಪತಿ ಇದ್ದ ಬೈಕ್ ಉಳ್ಳಾಲ ಕಡೆಗೆ ತಿರುಗುವ ಸಂದರ್ಭ ಅತಿ ವೇಗವಾಗಿ ತೊಕ್ಕೊಟ್ಟು ಫ್ಲೈಓವರ್ ಮೂಲಕ ಬಂದ ಲಾರಿ ಢಿಕ್ಕಿ ಹೊಡೆದು, ಇಬ್ಬರ ಮೇಲೂ ಚಲಿಸಿ ಕೆಲ ಮೀ. ದೂರಕ್ಕೆ ಎಳೆದುಕೊಂಡು ಹೋಗಿ ನಿಂತಿದೆ. ಘಟನೆಯಿಂದ ಪ್ರಿಯಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಯಾನ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.
ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೊನೆಗೊಳ್ಳುವಾಗ ಇರುವ ಅವೈಜ್ಞಾನಿಕ ತಿರುವಿನಿಂದಾಗಿ ಈ ಅಪಘಾತಗಳು ಸಂಭವಿಸುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.