ಮಂಗಳೂರು, ಅ. 27 (DaijiworldNews/SM): ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ನಿಧಾನಗತಿಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಸೋಂಕಿತರ ಸಂಖ್ಯೆಯಲ್ಲಿ ಕ್ರಮೇಣ ಇಳಿಕೆ ಕಂಡುಬರುತ್ತಿದೆ. ಮಂಗಳವಾರದಂದು 122 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 260 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ದ.ಕ. ಜಿಲ್ಲೆಯ ಮಂಗಳವಾರದ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು-248350
ಜಿಲ್ಲೆಯ ಒಟ್ಟು ನೆಗೆಟಿವ್ ಪ್ರಕರಣಗಳು-218535
ಜಿಲ್ಲೆಯಲ್ಲಿನ ಒಟ್ಟು ಪಾಸಿಟಿವ್ ಕೇಸ್ ಗಳು-29815
ಮಂಗಳವಾರದ ಪಾಸಿಟಿವ್ ಪ್ರಕರಣಗಳು-122
ಜಿಲ್ಲೆಯಲ್ಲಿ ಮಂಗಳವಾರ ಗುಣಮುಖರಾದವರು-260 ಮಂದಿ
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು-26858 ಮಂದಿ
ಮಂಗಳವಾರದಂದು ಒಬ್ಬರು ಸೋಂಕಿಗೆ ಬಲಿ
ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 668ಕ್ಕೆ ಏರಿಕೆ
ಜಿಲ್ಲೆಯಲ್ಲಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವವರು-2289 ಮಂದಿ