ನವದೆಹಲಿ, ಮೇ.26: 2103ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿ 4 ವರ್ಷ ಪೂರೈಸಿದ ಕೇಂದ್ರ ಸರಕಾರ 5ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 4 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನೆಲೆ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
"2014 ರ ಮೇ.26ರಂದು ನಾವು ಭಾರತದ ಬದಲಾವಣೆಗಾಗಿ ಕಾರ್ಯಾರಂಭ ಮಾಡಿದ್ದೆವು. ಕಳೆದ 4 ವರ್ಷಗಳಲ್ಲಿ ಅಭಿವೃದ್ಧಿ ಎನ್ನುವುದು ಸಾಮೂಹಿಕ ಚಳುವಳಿಯಾಗಿ ಪರಿವರ್ತನೆಯಾಗಿದ್ದು, ಪ್ರತಿಯೊಬ್ಬ ನಾಗರಿಕನೂ ಇದರಲ್ಲಿ ಭಾಗಿಯಾಗಲು ಬಯಸುತ್ತಿದ್ದಾನೆ. 125 ಕೋಟಿ ಭಾರತೀಯರು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿದ್ದಾರೆ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸುತ್ತಿದೆ, ನಮಗೆ ಭಾರತವೇ ಮೊದಲು, ಭವಿಷ್ಯದ ದೃಷ್ಟಿಯಿಂದ ನಮ್ಮ ಸರ್ಕಾರ ಜನಸ್ನೇಹಿ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದು ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಮಾತ್ರವಲ್ಲ, ಜನರ ಬೆಂಬಲವೇ ನಮ್ಮ ಶಕ್ತಿ ಎಂದು ತಿಳಿಸಿದ್ದಾರೆ.