ಮಂಗಳೂರು, ಮೇ 26: ಕರಾವಳಿಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಬೂತ್ ಮಟ್ಟದಲ್ಲಿ ಮತ್ತು ಕ್ಷೇತ್ರವಾರು ಚಿಂತನೆ ನಡೆಸಲಾಗುವುದು ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಹೇಳಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲ ದಿನಗಳ ಹಿಂದೆ ರಾಜ್ಯ ಸಭಾ ಚುನಾವಣೆ ನಡೆದಿತ್ತು. ಆದರೆ ಇವಿಎಂ ಬಗ್ಗೆ ಈಗಲೂ ಎಲ್ಲರಿಗೂ ಸಂಶಯ ಇದೆ. ಕರಾವಳಿಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಬೂತ್ ಮಟ್ಟದಲ್ಲಿ ಮತ್ತು ಕ್ಷೇತ್ರವಾರು ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಸಚಿವ ಸ್ಥಾನ ನೀಡುವುದು ಹೈಕಮಾಂಡ್ ತೀರ್ಮಾನವಾಗಿದ್ದು, ನನಗೆ ಸಚಿವ ಸ್ಥಾನ ನೀಡಿದರೆ ಇನ್ನಷ್ಟು ಸಾಧನೆ ಮಾಡುತ್ತೇನೆ. ನನ್ನ ಹಾಗೂ ಜೆಡಿಎಸ್ ಕಾರ್ಯದರ್ಶಿ ಮಧ್ಯೆ ಯಾವುದೇ ಪೈಪೋಟಿ ಇಲ್ಲ. ನಾವಿಬ್ಬರೂ ಉತ್ತಮ ಸ್ನೇಹಿತರು ಎಂದು ಸ್ಪಷ್ಟನೆ ನೀಡಿದ್ದಾರೆ.
ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷ ವಿಶ್ವಾಸಮತ ಸಾಬೀತು ಪಡಿಸಿದೆ. ಇದು ಪ್ರಜಾಪ್ರಭುತ್ವದ ಗೆಲುವು. ನೂತನ ಸರ್ಕಾರದ ಮೂಲಕ ಅಭಿವೃದ್ಧಿ ಕಾರ್ಯ ಮಾಡುತ್ತೇವೆ. ಹಿಂದಿನ ಸರ್ಕಾರದ ಜನಪರ ಯೋಜನೆಗಳನ್ನು ಮುಂದುವರಿಸುತ್ತೇವೆ. ಅಭಿವೃದ್ಧಿ ಕೆಲಸ ಮಾಡಲು ನೂತನ ನಾಯಕರು ಬದ್ಧರಾಗಿದ್ದಾರೆ ಎಂದು ಹೇಳಿದ್ದಾರೆ.
ಚುನಾವಣೆ ಪೂರ್ವ ಎಲ್ಲ ನಾಯಕರು ಆಶ್ವಾಸನೆ ಕೊಟ್ಟಿದ್ದಾರೆ. ಇದೀಗ ಬಿಜೆಪಿ ನಾಯಕರು ಸಾಲ ಮನ್ನಾ ಮಾಡಲು ಹೇಳುತ್ತಿದ್ದಾರೆ. ರೈತರ ಸಾಲಮನ್ನಾ ಮಾಡಲು ಸಮಯ ನಿಗದಿಪಡಿಸಬೇಕು. ಸಿದ್ದರಾಮಯ್ಯ ಅವರು ಕೊಟ್ಟ ಮಾತು ಉಳಿಸುತ್ತೇನೆ ಎಂದು ಹೇಳಿದ್ದಾರೆ. ಆದರೆ ವಿಶ್ವಾಸ ಮತಯಾಚನೆ ವೇಳೆ ಬಿಎಸ್ ವೈ ಹಠದಲ್ಲಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಈ ಬಗ್ಗೆ ಏನು ಹೇಳಬೇಕು ಹೇಳಿ..? ಇದೊಂದು ರಾಜಕೀಯ ಗಿಮಿಕ್ ಎಂದು ಖಾದರ್ ಹೇಳಿದ್ದಾರೆ.