ಕಾಸರಗೋಡು, ಅ. 28 (DaijiworldNews/SM): ಜಿಲ್ಲೆಯಲ್ಲಿ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಬುಧವಾರದಂದು 203 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಪೈಕಿ 200 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ.

ಇಂದಿನ ಒಟ್ಟು ಸೋಂಕಿತರ ಪೈಕಿ ವಿದೇಶದಿಂದ ಮರಳಿದ ಒಬ್ಬರಲ್ಲಿ ಸೋಂಕು ದೃಢಪಟ್ಟಿದ್ದು, ಇಬ್ಬರು ಹೊರರಾಜ್ಯಗಳಿಂದ ಮರಳಿದವರಾಗಿದ್ದಾರೆ. ಇನ್ನು ಗುಣಮುಖರಾಗುತ್ತಿರುವವರ ಸಂಖ್ಯೆಯೂ ಕೂಡ ಉತ್ತಮವಾಗಿದೆ. ಬುಧವಾರದಂದು ಮತ್ತೆ 360 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ 18,164 ಮಂದಿಗೆ ಸೋಂಕು ದೃಢಪಟ್ಟಿದ್ದು ಈ ಪೈಕಿ 16,242 ಮಂದಿ ಗುಣಮುಖರಾಗಿ ಬಿಡುಗಡೆಕೊಂಡಿದ್ದಾರೆ.
ಇನ್ನು 16,483 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ 1735 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಚಿಕಿತ್ಸೆ ಫಲಕಾರಿಯಾಗದೆ 183 ಮಂದಿ ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ. 4725 ಮಂದಿ ಪ್ರಸ್ತುತ ನಿಗಾದಲ್ಲಿದ್ದಾರೆ.