ಚಿತ್ರದುರ್ಗ, ಮೇ 27: ಕೇಂದ್ರ ಸರ್ಕಾರ ವೀರಶೈವ-ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡದೆ ಇದ್ದರೆ ತಾವು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಬಸಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ.ಹೀಗಾಗಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ನಂತರ ದೆಹಲಿಯಲ್ಲಿ ಬೃಹತ್ ಜಾಥಾ ನಡೆಸುತ್ತೇವೆ ಎಂದು ತಿಳಿಸಿದರು.
ಈ ಹಿಂದೆ ಲಿಂಗಾಯಿತ ಪ್ರತ್ಯೇಕ ಧರ್ಮ ಹೋರಾಟದ ಸಂದರ್ಭ ಬಿಜೆಪಿ ವಿರೋಧಿಸಿತ್ತು. ಆದರೆ ಈಗ ಪ್ರತ್ಯೇಕ ಧರ್ಮಕ್ಕಾಗಿ ಜನರ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಬೇಡಿಕೆಗೆ ಸ್ಪಂದಿಸಬೇಕಾದ ಅನಿವಾರ್ಯತೆ ಇದೆ. ನಮಗೆ ಈ ಹೋರಾಟದಲ್ಲಿ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ಸಿಗುವ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ , ಮೈತ್ರಿ ಸರ್ಕಾರದಲ್ಲಿ ಲಿಂಗಾಯತರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಅಗತ್ಯವಿದೆ. ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸಾಗಿದ್ದು, ಎಂ.ಬಿ.ಪಾಟೀಲ ಅವರಿ ಈ ಸ್ಥಾನಕ್ಕೆ ಸೂಕ್ತವಾಗಿದ್ದಾರೆ ಎಂದು ಮಾತೆ ಮಹಾದೇವಿ ಹೇಳಿದ್ದಾರೆ.