ಸುಬ್ರಹ್ಮಣ್ಯ,ಅ.30 (DaijiworldNews/HR): ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಹೊಸದಾಗಿ ಅಭಿವೃದ್ದಿ ಸಮಿತಿಯನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇದೀಗ ಹೊಸದಾಗಿ ಕಾರ್ಯನಿರ್ವಾಹಣಾಧಿಕಾರಿ ಸೇರಿ ಆರು ಜನರ ಅಭಿವೃದ್ಧಿ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.
ಪಿ.ಜಿ.ಎಸ್. ಪ್ರಸಾದ್, ಕೃಷ್ಣ ಶೆಟ್ಟಿ, ಪ್ರಸನ್ನ ಮತ್ತು ಎಸ್. ಮೋಹನ್ ರಾಮ ಮತ್ತು ವನಜಾ ಭಟ್ ಅವರು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಸಮಿತಿಯ ಸದಸ್ಯರಾಗಿ ನೇಮಕವಾಗಿದ್ದಾರೆ.
ಇದೀಗ ವ್ಯವಸ್ಥಾಪನಾ ಸಮಿತಿಯ ಬದಲಿಗೆ ಅಭಿವೃದ್ದಿ ಸಮಿತಿಯನ್ನು ಆಯ್ಕೆ ಮಾಡಲಾಗಿದ್ದು, ಮುಂದಿನ ಮೂರು ವರ್ಷಗಳ ಅವಧಿಗೆ ಈ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.