ಕುಂದಾಪುರ, ಅ.30 (DaijiworldNews/PY): ಕಾರು ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಗಾಯಗೊಂಡ ಘಟನೆ ತಾಲೂಕಿನ ಬಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆದ್ದಾರಿಯಲ್ಲಿ ನಡೆದಿದೆ.




ಜಿಂಕೆ ರಸ್ತೆ ದಾಟುತ್ತಿದ್ದ ಸಂದರ್ಭ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಬಾಲ್ಕೂರ್ ಗ್ರಾಮ ಪಂಚಾಯತ್ ಕಚೇರಿಯ ಮುಂದೆ ಈ ಘಟನೆ ನಡೆದಿದೆ.
ಸ್ಥಳಕ್ಕೆ ಭೇಟಿ ನೀಡಿದ ಶಂಕರನಾರಾಯಣ ಅರಣ್ಯ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸಿದ್ದಾರೆ. ಬಳಿಕ ಜಿಂಕೆ ಚೇತರಿಸಿಕೊಂಡಿದೆ.